Published On: Mon, Aug 1st, 2022

ಡಿ.16ರಿಂದ 18ರವರೆಗೆ ಆಳ್ವಾಸ್ ನುಡಿಸಿರಿ


ಮೂಡುಬಿದಿರೆ:
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ಡಿ.16ರಿಂದ 18ರವರೆಗೆ ನಡೆಯಲಿದೆ.

ಮೂರು ದಿನಗಳು ನಡೆಯುವ ಈ ಸಮ್ಮೇಳನವು ಸಂಭ್ರಮದ ವಾತಾವರಣವನ್ನು ಕಲ್ಪಿಸಿ ಕನ್ನಡದ ಬೆಳವಣಿಗೆಗೆ ಮಹತ್ವದ ಕಾಣಿಕೆ ನೀಡಬೇಕೆಂಬುದು, ಕನ್ನಡಿಗರನ್ನು ಒಗ್ಗೂಡಿಸಬೇಕೆಂಬುದು ನಮ್ಮ ಆಸೆ.

ಈ ನಿಟ್ಟಿನಲ್ಲಿ ನಾವು ಈಗಾಗಲೇ ಕಾರ್ಯಪ್ರವೃತರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಆಳ್ವಾಸ್ ನುಡಿಸಿರಿ 2022 ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಸಮ್ಮೇಳನದ ರೂವಾರಿ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter