ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯಕ್ಷಾಮೃತ’ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಡಾ.ಕೆ.ಪ್ರಭಾಕರ ಭಟ್ ಚಾಲನೆ
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆರಂಭಗೊಂಡ ‘ಯಕ್ಷಾಮೃತ’ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಚಾಲನೆ ನೀಡಿದರು. ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಮೋಹನ್ ಕುಮಾರ್ ಅಮ್ಮುಂಜೆ, ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ, ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಮತ್ತಿತರರು ಇದ್ದರು.
