ಸಿದ್ಧಕಟ್ಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಕ್ತದಾನ ಶಿಬಿರಕ್ಕೆ ಚಾಲನೆ
ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕ ವತಿಯಿಂದ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಪೂಜಾರಿ ಅಳಕೆ ಇದ್ದಾರೆ.

ಅನಿವಾರ್ಯ ಸಂದರ್ಭದಲ್ಲಿ ರೋಗಿಗಳಿಗೆ ಮರು ಜೀವ ನೀಡುವ ರಕ್ತದಾನ ಎಂಬುದು ಶ್ರೇಷ್ಟ ದಾನವಾಗಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಘವೇಂದ್ರ ಭಟ್ ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕ ವತಿಯಿಂದ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಂಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ ಅಳಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಗಬೆಟ್ಟು ಗ್ರಾಮ ಪಂಚಾಯಿತಿ, ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್, ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ನಡೆದ ಈ ಶಿಬಿರದಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆ ವೈದ್ಯರ ತಂಡ ಪಾಲ್ಗೊಂಡಿದ್ದರು. ಇದೇ ವೇಳೆ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಪ್ರಶಾಂತ್ ಪೂಜಾರಿ ಮತ್ತು ಗಂಗಾಧರ್ ಇವರನ್ನು ಅಭಿನಮದಿಸಲಾಯಿತು.
ವೈದ್ಯಾಧಿಕಾರಿ ಡಾ.ರಿಷಬ್ ಸಿಂಗ್, ಡಾ.ದಿವ್ಯ, ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ಬಿನ ಅಧ್ಯಕ್ಷೆ ಶೃತಿ ಮಾಡ್ತಾ, ಪಿಡಿಒ ಪದ್ಮ ನಾಯ್ಕ್, ಪ್ರಮುಖರಾದ ಸಂದೇಶ್ ಶೆಟ್ಟಿ ಪೊಡುಂಬ, ಪ್ರಭಾಕರ ಪ್ರಭು, ನಾರಾಯಣ ನಾಯಕ್, ಮೈಕಲ್ ಡಿಕೋಸ್ತಾ, ಸುರೇಶ್ ಶೆಟ್ಟಿ, ರಾಜೇಶ್ ನೆಲ್ಯಾಡಿ, ಡಾ. ಸುಂದ್ರೇಶ ಎನ್., ಯೋಜನಾಧಿಕಾರಿ ಹನುಮಂತಯ್ಯ ಜಿ.ಎಚ್. ಇದ್ದರು.
ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಗಣೇಶ್ ಶೆಟ್ಟಿ ಸ್ವಾಗತಿಸಿ, ಯೋಜನಾಧಿಕಾರಿ ಶೀನಪ್ಪ ಎನ್. ವಂದಿಸಿದರು. ರಕ್ಷಾ ಮತ್ತು ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.