ಮೂರು ದಿನದಲ್ಲಿ ಯೋಗಿ ಮೇಲೆ ಬಾಂಬ್ ದಾಳಿ – ಕಂಟ್ರೋಲ್ ರೂಂಗೆ ಸಂದೇಶ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಬಿಗಿ ಭದ್ರತೆಯನ್ನು ನೀಡಲಾಗಿದೆ.
ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿ ವಾಟ್ಸಪ್‍ನಲ್ಲಿ ಕೊಲೆ ಬೆದರಿಕೆ ಸಂದೇಶ ಬಂದಿತ್ತು. ಪೊಲೀಸ್ ಕಂಟ್ರೋಲ್ ರೂಂನ ಸಹಾಯವಾಣಿ ವಾಟ್ಸಪ್‍ನಲ್ಲಿ ಬಂದ ಮೆಸೆಜ್‍ನಲ್ಲಿ 3 ದಿನಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದೆ.
ಈ ಹಿನ್ನೆಲೆಯಲ್ಲಿ ಸಹಾಯವಾಣಿಯ ಆಪರೇಷನ್ ಕಮಾಂಡರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಮೆಸೇಜ್ ಕಳುಹಿಸುವವರನ್ನು ಗುರುತಿಸಿ, ಬಂಧಿಸಲು ಶೋಧ ನಡೆಯುತ್ತಿದೆ.