ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜು ಪಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುರುವಾರ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಿವೃತ್ತ ಮಲೇರಿಯ ಪರಿವೀಕ್ಷಕ ಜಯರಾಮ್ ಪೂಜಾರಿ ಉದ್ಘಾಟಿಸಿದರು.
ಬಾಲ್ಯದಿಂದಲೇ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಉಳಿಯಲು ಅವರಲ್ಲಿ ಜನ ಜಾಗೃತಿ ಮೂಡಿಸಿದಾಗ ಸ್ವಾಸ್ಥ್ಯ ಮತ್ತು ಸಮೃದ್ಧ ಸಮಾಜ ನಿರ್ಮಾಣವಾಗುತ್ತದೆ ಎಂದು ತಾಲ್ಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುರುವಾರ ನಡೆದ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿವೃತ್ತ ಮಲೇರಿಯ ಪರಿವೀಕ್ಷಕ ಜಯರಾಮ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತ ನೀಡಿದರು. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಬಿತಾ ಲವಿನ ಪಿಂಟೋ, ಸಂಚಾಲಕ ವಿಜಯ ಚೌಟ, ಪ್ರೌಢಶಾಲಾ ಮುಖ್ಯಶಿಕ್ಷಕ ಗಿಲ್ಬರ್ಟ್ ಡಿಸೋಜಾ ಇದ್ದರು.
ಯೋಜನೆ ಮೇಲ್ವಿಚಾರಕ ಶಿವರಂಜನ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋಧರ ಶೆಟ್ಟಿ ವಂದಿಸಿದರು. ರಾಘವೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.