ಬಿ.ಸಿ.ರೋಡು: ಕೃಷಿ ಇಲಾಖೆ ಮತ್ತು ಲಯನ್ಸ್ ಕ್ಲಬ್ ಸಹಭಾಗಿತ್ವ ‘ಕಿರು ಆಹಾರ ಸಂಸ್ಕರಣಾ ಉದ್ಯಮ ಯೋಜನೆ’ ಮಾಹಿತಿ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಲಯನ್ಸ್ ಸೇವಾ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ’ ಬಗ್ಗೆ ಮಾಹಿತಿ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.
ಬಂಟ್ವಾಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಆತ್ಮನಿರ್ಭರ ಭಾರತ ರೂಪಿಸಲು ಯುವಜನತೆ ಮತ್ತು ಕೃಷಿಕರಿಗೆ ಸ್ವಾವಲಂಬನೆ ಜೊತೆಗೆ ಉದ್ಯಮ ಆರಂಭಿಸಲು ಉತ್ತೇಜನ ನೀಡುತ್ತಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್‌ತು ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡು ಲಯನ್ಸ್ ಸೇವಾ ಮಂದಿರದಲ್ಲಿ ಕೃಷಿ ಇಲಾಖೆ ಮತ್ತು ಲಯನ್ಸ್ ಕ್ಲಬ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಆತ್ಮ ಯೋಜನೆಯಡಿ ತರಬೇತಿ ಮತ್ತು ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ’ ಬಗ್ಗೆ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಪ್ರವೀಣ್, ಪಿಎಂಎಫ್‌ಎಂ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಡಾ. ಫಜಲ್, ಸಂಕಪ್ಪ ಶೆಟ್ಟಿ, ಕೃಷಿ ಅಧಿಕಾರಿ ಬಿ.ಬಿ.ಅನಘವಾಡಿ, ಎಸ್.ಕೆ.ಸರಿಕ್ಕರ್, ಆತ್ಮ ಯೋಜನೆ ಬಿಟಿಎಂ ದೀಕ್ಷಾ, ಹನುಮಂತ ಕಾಳಗಿ, ವಿರೂಪಾಕ್ಷಿ, ರಾಜಾ ಬಂಟ್ವಾಳ್ ಮಾಹಿತಿ ನೀಡಿದರು. ಇದೇ ವೇಳೆ ಹಣ್ಣಿನ ಗಿಡ ವಿತರಣೆ ಮತ್ತು ಪಿಎಂ ಕಿಸಾನ್ ಕೆವೈಸಿ ಜೋಡಣೆ ನಡೆಯಿತು.
ಕೃಷಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ನಂದನ್ ಶೆಣೈ ಪ್ರಾಸ್ತಾವಿಕ ಮಾತನಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ಯ ಸ್ವಾಗತಿಸಿ, ಮಾಜಿ ಅಧ್ಯಕ್ಷ ಮಧ್ವರಾಜ್ ಕಲ್ಮಾಡಿ ವಂದಿಸಿದರು.