ಬೆಂಗಳೂರು: ಚಿತ್ರನಟ ಹಾಗೂ ರಾಜ್ಯ ಸಚಿವ ಅಂಬರೀಶ್ಗೆ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಶುಕ್ರವಾರದಂದು ರಾತ್ರಿ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಅಂಬರೀಶ್ ಜ್ವರದಿಂದ ಬಳಲುತ್ತಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದರು, ಆದರೆ ಅವರಿಗೆ ಪದೇಪದೇ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳುತ್ತಿತ್ತು. ಶುಕ್ರವಾರ ರಾತ್ರಿಯೂ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾದ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು ಇನ್ನೆಡರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾಜರ್್ ಮಾಡುವುದಾಗಿ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.

