ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬಂಟ್ವಾಳ: ತಾಲೂಕು ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ರಾಷ್ಟ್ರೀಯ ಹಬ್ಬ ಕಾರ್ಯಕ್ರಮವು ನಡೆಯಿತು. ಕರಿಯಂಗಳ ಗ್ರಾಂ.ಪಂ. ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಧ್ವಜಾರೋಹಣ ನೆರವೇರಿಸಿದರು. ಹಾಗೂ ಜನಪ್ರತಿನಿಧಿಗಳು ಶಾಲಾ ಮಕ್ಕಳು ಶಾಲಾ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಅಧಿಕಾರಿ ಹಾಗೂ ನೌಕರವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರಿಯಂಗಳ ಗ್ರಾಮದ ಕಲ್ಕುಟ ಕುಳ ಕೆರೆ ಎಂಬಲ್ಲಿ ಬಡಕಬೈಲ್ನವಾಸಿ ಶ್ರೀ ಅನಿಶ್ ಆಚಾರ್ಯ ಮಾಜಿ ಸೈನಿಕರು ಇವರು ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಕ್ರಿಯೆಗಳು ಗ್ರಾಂ.ಪಂ.ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಉಪಾಧ್ಯಕ್ಷೆ ವೀಣಾ ಆಚಾರ್ಯ ಹಾಗೂ ಸರ್ವ ಸದಸ್ಯರು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯಿತಿ ಎಡಿಜಿಪಿ ಎಸ್ ಅಧಿಕಾರಿ ಸಹಾಯಕ ನಿರ್ದೇಶಕರು ನರೇಗಾ ತಾಂತ್ರಿಕ ಸಿಬ್ಬಂದಿ ವರ್ಗದವರು ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಬ್ಯಾಂಕ್ ಅಧಿಕಾರಿಗಳು ನೌಕರರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪಂಚಾಯತ ಅಭಿವೃದ್ಧಿ ಅಧಿಕಾರಿ ಲೆಕ್ಕ ಸಹಾಯಕರು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಶಾಲೆಯ ಮುಖ್ಯೋಪಾಧ್ಯಾಯರುಗಳು ಸಹ ಶಿಕ್ಷಕರು ಶಾಲಾ ಮಕ್ಕಳು ಸಾರ್ವಜನಿಕರು ಭಾಗವಹಿಸಿದ್ದರು. ಶಿಕ್ಷಕಿ ರಂಜಿತಾ ನಿರೂಪಿಸಿದರು,ರಾಜು ಕೋಟ್ಯಾನ್ ವಂದಿಸಿದರು.