ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಅಖಂಡ ಭಜನಾ ಕಾರ್ಯಕ್ರಮ
ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪೂಜ್ಯ ಸ್ವಾಮಿ ಬೋಧ ಸ್ವರೂಪಾನಂದಜೀ ಮಹಾರಾಜ್ ಚಾಲನೆ ನೀಡಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ರಾಮಕೃಷ್ಣ ತಪೋವನ ದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಉಪಸ್ಥಿತರಿದ್ದರು,ಪೊಳಲಿ ರಾಜರಾಜೇಶ್ವರೀ ಭಜನಾ ಮಂಡಳಿಯವರಿಂದ ಭಜನೆ ಪ್ರಾರಂಭಗೊಂಡಿತು.




