ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ
ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ಆಚರಿಸಲಾಯಿತು.
ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಶ್ರೀಕೃಷ್ಣನ ಜೀವನವು ನಮಗೆ ಪ್ರತೀ ಹಂತದಲ್ಲೂ ಮಾರ್ಗದರ್ಶನ ಮಾಡುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪತಹಸೀಲ್ದಾರ್ ನವೀನ್ ಬೆಂಜನಪದವು ಮಾತನಾಡಿ ಭಗವದ್ಗೀತೆಯು ಎಲ್ಲಾ ಸಂದರ್ಭಗಳಲ್ಲೂ ಅಳವಡಿಸಿಕೊಳ್ಳಬಹುದಾದ, ಜಗತ್ತಿನ ಎಲ್ಲರೂ ಸ್ವೀಕರಿಸಿರುವ ಮತ್ತು ಗೌರವಿಸುವ ಪವಿತ್ರ ಗ್ರಂಥ. ಜಗತ್ತಿಗೆ ಭಗವದ್ಗೀತೆಯ ತತ್ವಗಳನ್ನು ಉಪದೇಶಿಸಿದ ಶ್ರೇಷ್ಠ ನಾಯಕ ಶ್ರೀ ಕೃಷ್ಣ.
ಶ್ರೀ ಕೃಷ್ಣನನ್ನು ಹಾಸ್ಯಾಸ್ಪದವಾಗಿ ಬಿಂಬಿಸುವುದನ್ನು ನಿಲ್ಲಿಸಿ ಅದರ ಹಿಂದಿರುವ ನೈಜ ತತ್ವಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಶುಭ ಹಾರೈಸಿದರು. ಉಪತಹಸೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕರಾದ ವಿಜಯ್ ಆರ್,ಸಂತೋಷ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.