ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ
ಉಡುಪಿ: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆ ಕುದಿ ಇವರ ಸಹಯೋಗದಲ್ಲಿ ಉಡುಪಿ ವಲಯ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆ ಕುದಿಯಲ್ಲಿ ನಡೆಯಿತು.
ಪಂದ್ಯಾಟದಲ್ಲಿ ಲಯನ್ಸ್ ಪಡುಬಿದ್ರೆ ಪ್ರಥಮ ಸ್ಥಾನ, ಸಾಗರ್ ವಿದ್ಯಾ ಮಂದಿರ್ ಪಡುಬಿದ್ರೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.