ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಾದುಕಾ ಪೂಜೆ ನೆರವೇರಿಸಿ ಆಶೀರ್ವಾದ ಪಡೆದ ರಾಜೇಶ್ ನಾಯ್ಕ್
ಉಜಿರೆ: ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುರುಗಳ ಪಾದುಕಾ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬಂಟ್ವಾಳ ಮಂಡಲ ಪ್ರ.ಕಾರ್ಯದರ್ಶಿ ಡೊಂಬಯ ಅರಳ, ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.