ದಡ್ಡಲಕಾಡು: ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ
ಬಂಟ್ವಾಳ: ತಾಲ್ಲೂಕಿನ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.24ರಂದು ಬುಧವಾರ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ ಕಾರ್ಯಕ್ರಮಕ್ಕೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಯೋಗ ದಿನಾಚರಣೆ ಮೂಲಕ ಜಗತ್ತಿಗೆ ಯೋಗದ ಮಹತ್ವ ತಿಳಿಸಿದ್ದಾರೆ ಎಂದರು. ದೈಹಿಕ ಶಿಕ್ಷಣ ಪರಿವೀಕ್ಷಕ ಭುವನೇಶ್ ಶುಭ ಹಾರೈಸಿದರು. ಪಂಜಿಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ರತ್ನಾವತಿ, ಶಾಲಾಭಿವರದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಅಂಚನ್, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಮುಖ್ಯಶಿಕ್ಷಕ ರಮಾನಂದ, ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣು ಹೆಬ್ಬಾರ್ ಇದ್ದರು.