ಗುಡ್ಡೆಯಂಗಡಿ: ಓಂ ಜನಹಿತಾಯ ಶಾಲೆ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಚಾಲನೆ
ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ ಚಾಲನೆ ನೀಡಿದರು.
ಬಂಟ್ವಾಳ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಸುವ ಮೂಲಕ ಅವರ ಪ್ರತಿಭೆ ಅರಳಿಸಲು ಅವಕಾಶ ಸಿಗುತ್ತದೆ ಎಂದು ಅರಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ ಹೇಳಿದ್ದಾರೆ.
ಇಲ್ಲಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ರಾಯಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಇದರ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ರಂಜನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರತ್ನ, ಜ್ಯೋತಿ ರಾಡ್ರಿಗಸ್, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರೇಮಲತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗಧೀಶ ಆಳ್ವ ಅಗ್ಗೊಂಡೆ, ಆಡಳಿತಾಧಿಕಾರಿ ರಕ್ಷಾ ಆರ್.ಶೆಟ್ಟಿ, ಕ್ಲಸ್ಟರ್ ಪ್ರದೀಪ್ ಇದ್ದರು. ಮುಖ್ಯಶಿಕ್ಷಕ ಮಹೇಶ ಶೆಟ್ಟಿ ಸ್ವಾಗತಿಸಿ, ಶಿಕ್ಷಕ ರವಿ ಕುಮಾರ್ ವಂದಿಸಿದರು. ಶಿಕ್ಷಕಿ ರೇವತಿ ಕಾರ್ಯಕ್ರಮ ನಿರೂಪಿಸಿದರು.