ವಿಠಲ ಕಾಲೇಜಿನ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ
ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ, ದ ಕ ಜಿಲ್ಲೆ ಮಂಗಳೂರು ಹಾಗೂ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ ೨೦೨೨-೨೩ ವಿಠಲ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಆ.27ರಂದು ಶನಿವಾರ ನಡೆಯಿತು.
ಈ ಪಂದ್ಯಾಟದ ಉದ್ಘಾಟನೆಯನ್ನು ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ನೆರವೇರಿಸಿದರು. ವಿಠಲ ವಿದ್ಯಾಸಂಘದ ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ಪದ್ಮöಯ್ಯ ಗೌಡ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ದೈಹಿಕ ಶಿಕ್ಷಣ ನಿರ್ಧೇಶಕ ಶ್ರೀನಿವಾಸ್ ಮೊದಲಾದವರು ಉಪಸ್ಥಿತರಿದ್ದರು.