ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಕಾಂಗ್ರೆಸ್ ಮುಖಂಡರ ಸಂಭ್ರಮ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮುಖ್ಯ ವೃತ್ತ ಬಳಿ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಕಾಂಗ್ರೆಸ್ ಮುಖಂಡರು ಸಂಭ್ರಮದಿಂದ ಸ್ವಾಗತಿಸಿದರು.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಕೆ.ಮಾಯಿಲಪ್ಪ ಸಾಲ್ಯಾನ್, ಮಧುಸೂಧನ ಶೆಣೈ, ಲೋಲಾಕ್ಷ ಶೆಟ್ಟಿ, ಅಬ್ಬಾಸ್ ಆಲಿ, ಜಗದೀಶ ಕುಂದರ್, ರಾಜೇಶ ಗೌಡ, ಉಮೇಶ ಕುಲಾಲ್ ಮತ್ತಿತರರು ಇದ್ದರು.