ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಆ.31ರಿಂದ ಸೆ.02ರ ತನಕ ನಡೆದ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವನ್ನು ಶ್ರೀ ಅಯ್ಯಪ್ಪ ದೇವಸ್ಥಾನದ ಬಟ್ಟು ಯಾನೆ ನಾರಾಯಣ ಗುರುಸ್ವಾಮಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮೇಗಿನಪೇಟೆ ಶ್ರೀ ಮಹಮ್ಮಾಯಿ ಮಂದಿರದಿಂದ ಮೆರವಣಿಗೆ ಮೂಲಕ ಶ್ರೀ ಗಣಪತಿ ಮೂರ್ತಿಯನ್ನು ತರಲಾಯಿತು.

ಅಶ್ವಿನಿ ಕ್ಲಿನಿಕ್‌ನ ದಂತ ವೈದ್ಯ ಡಾ| ಕಿಶೋರ್ ಧ್ವಜಾರೋಹಣ ನೆರವೇರಿಸಿದರು. ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರದ ಸತ್ಸಂಗ್ ಪ್ರಮುಖ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರ ಮಹಮ್ಮಾಯಿ ಮಂದಿರದ ಆಡಳಿತ ಮೊಕ್ತೇಸರ ವಿ ಸೀನ ಉಪಸ್ಥಿತರಿದ್ದರು. ಸಮಿತಿ ಗೌರವಾಧ್ಯಕ್ಷ ವಿ ರಾಮದಾಸ ಶೇಣೈ ಸ್ವಾಗತಿಸಿದರು. ಉಕ್ಕುಡ ಗೋಪಾಲಕೃಷ್ಣ ಪ್ರಾರ್ಥಿಸಿದರು. ಗೋವರ್ಧನ ಕುಮಾರ್ ಇಡ್ಯಾಳ ವಂದಿಸಿದರು. ಹರೀಶ್ ಕೆ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *