ವಾಮದಪದವು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ
ಬಂಟ್ವಾಳ: ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್ ಚಾಲನೆ ನೀಡಿದರು.
ಬಂಟ್ವಾಳ ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.02ರಂದು ಶುಕ್ರವಾರ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಬಿ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐ ಕ್ಯೂ ಎ ಸಿ, ರೆಡ್ ರಿಬ್ಬನ್ ಕ್ಲಬ್, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಸಹಭಾಗಿತ್ವದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು. ವೈದ್ಯಾಧಿಕಾರಿ ಡಾ. ಸವಿತಾ, ಡಾ.ರವಿ ಎಂ.ಎನ್., ಡಾ. ಮೇರಿ ಎಂ.ಜೆ., ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಮತ್ತಿತರರು ಇದ್ದರು.