Published On: Thu, Sep 8th, 2022

ರಿಯಾಝ್ ಫರಂಗಿಪೇಟೆ ಮನೆ ಮೇಲೆ ಎನ್.ಐ.ಎ ದಾಳಿ ಪ್ರಕರಣ; ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ದಾಳಿ ಅಲ್ಲ; ಬಿಹಾರದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಸಂಬಂಧ ದಾಳಿ

ಮಂಗಳೂರು : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಎನ್.ಐ.ಎ ಅಧಿಕಾರಿಗಳು ಎಸ್.ಡಿ.ಪಿ.ಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದ್ದು ಆದ್ರೆ ಇದು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದ ದಾಳಿ ಅಲ್ಲ ಬಿಹಾರದ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ಎನ್.ಐ.ಎ ದಾಳಿ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಬಿಹಾರದಲ್ಲಿ ಇತ್ತೀಚೆಗೆ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(NIA)ಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಬಾಂಬ್ ಸ್ಫೋಟಿಸಿದ ಆರೋಪಿಗಳ ಜೊತೆ ಎಸ್.ಡಿ.ಪಿ.ಐ ನಾಯಕ ರಿಯಾಝ್ ಫರಂಗಿಪೇಟೆ ಫೋನ್ ಸಂಪರ್ಕದಲ್ಲಿದ್ದ ಎಂಬ ಆರೋಪದ ಮೇಲೆ ಇಂದು ಬೆಳಗ್ಗೆ 6 ಗಂಟೆಗೆ ಕೋರ್ಟ್‌ ಸರ್ಚ್ ವಾರೆಂಟ್ ಪಡೆದು ಬಂದ ಬಿಹಾರದಿಂದ ಬಂದ ನಾಲ್ಕು ಜನ ರಾಷ್ಟ್ರೀಯ ತನಿಖಾ ದಳದ(NIA) ಅಧಿಕಾರಿಗಳ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಸಹಕಾರ ಪಡೆದು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನೂ ದಾಳಿ ವಿಚಾರ ತಿಳಿದ ಎಸ್.ಡಿ.ಪಿ.ಐ ಕಾರ್ಯಕರ್ತರು ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಬಳಿಕ ಪೊಲೀಸರು ತಿಳುವಳಿಕೆ ನೀಡಿ ವಾಪಸ್ ಕಳುಹಿಸಿದ್ದಾರೆ.


ಎಸ್.ಡಿ.ಪಿ.ಐ ನಾಯಕ ರಿಯಾಝ್ ಫರಂಗಿಪೇಟೆ ಆರೋಪಿಗಳ ಜೊತೆ ನೇರ ಸಂಪರ್ಕವನ್ನು ಹೊಂದಿದ್ದ ಎಂಬ ಆರೋಪದ ಮೇಲೆ ಹೆಚ್ಚಿನ ವಿಚಾರಣೆಗಾಗಿ ಬಿಹಾರ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter