ಪಿಲಾತಬೆಟ್ಟು: ಹರ್ ಘರ್ ಜಲ್ ಘೋಷಣೆ
ಬಂಟ್ವಾಳ: ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ನಲ್ಲಿ ‘ಹರ್ ಘರ್ ಜಲ್’ಘೋಷಣೆ ಕಾರ್ಯಕ್ರಮ ಬುಧವಾರ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಮತ್ತಿತರರು ಇದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಪಿಲಾತಬೆಟ್ಟು ಗ್ರಾಮ ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ. ಇಲ್ಲಿನ ಪ್ರತೀ ಮನೆಗೆ ನಳ್ಳಿ ನೀರಿನ ಸಂಪರ್ಕ ನೀಡಲಾಗಿದ್ದು, ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಪಂಚಾಯಿತಿ ತನ್ನ ಗುರಿ ಮುಟ್ಟಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಹೇಳಿದ್ದಾರೆ.
ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹೆಗ್ಡೆ, ಪಿಡಿಒ ಯಮನಪ್ಪ ಕೊರವರ, ಯೋಜನಾ ವ್ಯವಸ್ಥಾಪಕ ವಿಘ್ನೇಶ್ ರಾಜ್, ಎಂಜಿನಿಯರ್ ಕೃಷ್ಣ, ಅಶ್ವಿನ್, ಚರಣ್ ರಾಜ್ , ವಿಲ್ಮಾ ಮತ್ತಿತರರು ಇದ್ದರು.