ಬಂಟ್ವಾಳ: ಮೈಸೂರಿನಲ್ಲಿ ಇತ್ತೀಚೆಗೆ ರಾಜ್ಯಮಟ್ಟದ ೧೭ರ ವಯೋಮಾನದ ಕೆಟೆಲ್ ಬೆಲ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಎಸ್.ವಿ.ಎಸ್‌ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ, ಬಂಟ್ವಾಳದ ೯ನೇ ತರಗತಿ ವಿದ್ಯಾರ್ಥಿಗಳಾದ ಕುಮಾರ್ ಸ್ರೇಯಸ್, ಐಯಾನ್‌ ಅಬ್ದುಲ್ ಲತೀಫ್ ಮತ್ತು ಮಯೂರ್‌ ಎನ್. ಪಿ ಇವರು ಭಾಗವಹಿಸಿ ವಿಜೇತರಾಗಿದ್ದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರನ್ನು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಉಪಾಧ್ಯಕ್ಷೆ ವತ್ಸಲಾ ಕಾಮತ್, ಕರ‍್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ, ಅನಿರುದ್ಧ ಕಾಮತ್, ಎಸ್.ವಿ.ಎಸ್ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

By suddi9

Leave a Reply

Your email address will not be published. Required fields are marked *