ಚಿಕ್ಕೋಡಿ: ಮೊಬೈಲ್ ಟವರ್(Mobile Tower) ಬಳಿ ಆಟ ಆಡುವಾಗ ವಿದ್ಯುತ್(Electricity) ತಗುಲಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಂಕರಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ(Belagavi) ಜಿಲ್ಲೆಯ ಅಥಣಿ ತಾಲೂಕಿನ ಶಂಕರಟ್ಟಿ ಗ್ರಾಮದ ಮಲ್ಲಿಕಾರ್ಜುನ್ ಮುಗಳಖೊಡ (13) ಮೃತ ದುರ್ದೈವಿ ಬಾಲಕ. ಮಲ್ಲಿಕಾರ್ಜುನ್ ಗ್ರಾಮದ ಹೊರವಲಯದಲ್ಲಿ ಆಟ ಆಡುವ ಸಂದರ್ಭದಲ್ಲಿ ಮೊಬೈಲ್ ಟವರ್ ಬಳಿ ಹೋಗಿದ್ದಾನೆ. ಆ ವೇಳೆ ಬಾಲಕನಿಗೆ ವಿದ್ಯುತ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *