ಬಂಟ್ವಾಳ: ಪುರಸಭೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ‘ನಿರ್ಮಲ ಬಂಟ್ವಾಳ’ ಅಭಿಯಾನ ಯೋಜನೆಯಡಿ ಬಂಟ್ವಾಳದಲ್ಲಿ ಶನಿವಾರ ಏರ್ಪಡಿಸಿದ್ದ ‘ಘನ ತ್ಯಾಜ್ಯ ಸಂಗ್ರಹಣೆ ಹಾಗೂ ನಿರ್ವಹಣೆ’ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಪುರಸಭಾಧ್ಯಕ್ಷೆ ವಸಂತಿ, ಉಪಾದ್ಯಕ್ಷೆ ಯಾಸ್ಮಿನ್ ಮತ್ತಿತರರು ಇದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಸಾಮೂಹಿಕ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ಸರ್ಕಾರ ಮಾತ್ರವಲ್ಲದೆ ವಿವಿಧ ಸಂಘ ಸಂಸ್ಥೆಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
15btl-purasabhe

ಬಂಟ್ವಾಳ ಪುರಸಭೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ‘ನಿರ್ಮಲ ಬಂಟ್ವಾಳ’ ಅಭಿಯಾನ ಯೋಜನೆಯಡಿ ಬಂಟ್ವಾಳದಲ್ಲಿ ಶನಿವಾರ ಏರ್ಪಡಿಸಿದ್ದ ‘ಘನ ತ್ಯಾಜ್ಯ ಸಂಗ್ರಹಣೆ ಹಾಗೂಹಣೆ’ ಬಗ್ಗೆ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ರೂಪಿಸಲಾಗಿರುವ ಈ ವಿನೂತನ ಯೋಜನೆಯನ್ನು ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಪ್ರಥಮ ಹಂತದಲ್ಲಿ ಅನುಷ್ಠಾನಗೊಳಿಸಿ ಬಳಿಕ ರಾಜ್ಯಮಟ್ಟಕ್ಕೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ 2ಕೋಟಿ ಮೊತ್ತದ ಅನುದಾನವೂ ಪುರಸಭೆಗೆ ದೊರೆಯಲಿದೆ ಎಂದರು.
ಅರಣ್ಯ ಮತ್ತು ಪರಿಸರ ಸಂರಕ್ಷಣೆ ಜೊತೆಗೆ ವಿವಿಧ ಜೀವವೈವಿಧ್ಯ ಉಳಿಸಿದರೆ ಮಾತ್ರ ಮನುಷ್ಯರಿಗೂ ಆರೋಗ್ಯವಂತರಾಗಿ ಜೀವಿಸಲು ಸಾಧ್ಯವಾಗುತ್ತದೆ.

ಮಂಗಳೂರಲ್ಲಿ ರೂ 5 ಕೋಟಿ ವೆಚ್ಚದ ‘ಇಕೋ ಅರ್ಬನ್ ಪಾರ್ಕ್ ನಿರ್ಮಾಣ’ ಮಾಡಿದ ಬಳಿಕ ರಾಜ್ಯದೆಲ್ಲೆಡೆ ವಿಸ್ತರಿಸುವ ಚಿಂತನೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.
ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಕಾರ್ಯದರ್ಶಿ ರಾಮಚಂದ್ರ ಮಾತನಾಡಿ, ಪರಿಸರ ಮಾಲಿನ್ಯ ನಿಯಂತ್ರಿಸಲು ಇಲಾಖೆ ಜೊತೆಗೆ ಪ್ರತಿಯೊಬ್ಬ ನಾಗರಿಕರಿಗೂ ಜವಾಬ್ದಾರಿ ಇದೆ. ಆ ಮೂಲಕ ಗ್ರಾಮ ನೈರ್ಮಲ್ಯ ಕಾಪಾಡಲು ಕಾಪಾಡಲು ಸಾಧ್ಯವಿದೆ ಎಂದು ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯ ಕಾರ್ಯದರ್ಶಿ  ವಿಜಯಕುಮಾರ್ ಪ್ರಾಸ್ತಾವಿಕ ಮಾತನಾಡಿದರು.
ಜಿಲ್ಲಾ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಟಿ. ಹನುಮಂತಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಡಾ. ಎಸ್.ಕೆ. ಎಸ್. ಸ್ವಾಮಿ, ಪ್ರೊ. ಹರೀಶ್ ಜೋಶಿ, ರಾಘವೇಂದ್ರ, ಜಿಲ್ಲಾ ಯೋಜನಾಧಿಕಾರಿ ತಾಕತ್ ರಾವ್ ಮತ್ತಿತರರು ಮಾಹಿತಿ ನೀಡಿದರು.

ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ, ಉಪಾಧ್ಯಕ್ಷೆ ಯಾಸ್ಮಿನ್ ಅಹ್ಮದ್ ಮತ್ತಿತರರು ಇದ್ದರು.
ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಸ್ವಾಗತಿಸಿ, ಹಿರಿಯ ಅಧಿಕಾರಿ ಜಯಪ್ರಕಾಶ್ ನಾಯಕ್ ವಂದಿಸಿದರು. ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *