ಪಕ್ಷಿ ಸಂಕುಲ ಸಂರಕ್ಷಣೆ ಅಗತ್ಯ: ನಿತ್ಯಾನಂದ ಶೆಟ್ಟಿ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಗುಬ್ಬಚ್ಚಿಗೂಡು’ ಜಾಗೃತಿ ಮಾಹಿತಿ ಕಾರ್ಯಕ್ರಮ ಗುರುವಾರ ನಡೆಯಿತು.

ಸದೃಢ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪರಿಸರ ಸಂರಕ್ಷಣೆ ಜೊತೆಗೆ ಗುಬ್ಬಚ್ಚಿಯಂತಹ ಪಕ್ಷಿ ಸಂಕುಲ ಉಳಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಗುಬ್ಬಚ್ಚಿಗೂಡು’ ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಅಭಿಯಾನ ಸಂಚಾಲಕಿ ರಮ್ಯಾ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನೀಡಿದರು. ಪ್ರಾಣಿ ಪಕ್ಷಿಗಳಿಗೆ ಪ್ರತಿನಿತ್ಯ ಆಹಾರ ನೀರು ಇಡುವ ಕ್ರಮ ಮೈಗೂಡಿಸಿಕೊಳ್ಳಬೇಕು ಎಂದರು. ಮುಖ್ಯಶಿಕ್ಷಕಿ ವಿನಿತಾ ಸ್ವಾಗತಿಸಿ, ವಂದಿಸಿದರು. ಸಹಶಿಕ್ಷಕಿ ಭವಾನಿ ಕಾರ್ಯಕ್ರಮ ನಿರೂಪಿಸಿದರು.