ಸಿದ್ಧಕಟ್ಟೆ: ಗುಣಶ್ರೀ ಪದವಿಪೂರ್ವ ಕಾಲೇಜು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಚಾಲನೆ, ಕಲಾ ಪ್ರತಿಭೆ ಅನಾವರಣಕ್ಕೆ ಪೂರಕ: ಮಾಜಿ ಸಚಿವ ನಾಗರಾಜ ಶೆಟ್ಟಿ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ (ಕಲೋತ್ಸವ) ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸಿದರು.

ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಮತ್ತು ಪ್ರತಿಭಾ ಕಾರಂಜಿಯಂತಹ ಸ್ಪರ್ಧೆ ಅವಶ್ಯಕವಾಗಿದೆ ಎಂದು ಮನ್ ದೇವ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ (ಕಲೋತ್ಸವ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಆರ್.ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಜ್ಞಾನೇಶ್, ಶಿಕ್ಷಣ ಸಂಯೋಜಕಿ ಸುಜಾತ, ಸುಧಾ, ಪ್ರತಿಮಾ, ಕ್ಲಸ್ಟರ್ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ಮುಖ್ಯಶಿಕ್ಷಕ ಗಿಲ್ಬಟ್ ð ಡಿಸೋಜ ಮತ್ತಿತರರು ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿ ವಿದ್ಯಾ ಕುಮಾರಿ, ನಾಗರತ್ನ, ಪ್ರೇಮಲತಾ, ಜ್ಯೋತಿ ರಾಡ್ರಿಗಸ್, ರವಿ ಕುಮಾರ್, ಪ್ರದೀಪ್ ಕುಮಾರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೊ, ಸಂಘಟನಾ ಕಾರ್ಯದರ್ಶಿ ಮಹೇಶ ಕರ್ಕೇರ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಚೆನ್ನಕೇಶವ, ಸಂಸ್ಥೆ ಸಂಚಾಲಕ ವಿಜಯ ಕುಮಾರ್ ಚೌಟ, ಪ್ರಾಂಶುಪಾಲೆ ಪೂಜಾ, ಲಾವಣ್ಯ, ರವೀಂದ್ರ, ಸುರೇಖ ಮತ್ತಿತರರು ಇದ್ದರು.ಸಂಸ್ಥೆ ಕಾರ್ಯದರ್ಶಿ ಸಬಿತಾ ಲವಿನಾ ಪಿಂಟೋ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ವಂದಿಸಿದರು. ಶಿಕ್ಷಕಿ ಶಾರದಾ ಕಾರ್ಯಕ್ರಮ ನಿರೂಪಿಸಿದರು.