ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್; ಇಬ್ಬರು ಉಗ್ರರು ಹತ್ಯೆ
ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ನೌಗಾಮ್ ಪ್ರದೇಶದಲ್ಲಿ ಬುಧವಾರ ಪೊಲೀಸರು ಎನ್‌ಕೌಂಟರ್ (Encounter) ನಡೆಸಿ ಇಬ್ಬರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಈ ಕುರಿತು ಟ್ವೀಟ್ ಮಾಡಿದ್ದು, ಭಯೋತ್ಪಾದಕ ಗುಂಪು ಅನ್ಸರ್ ಘಜ್ವತ್-ಉಲ್-ಹಿಂದ್‌ನೊಂದಿಗೆ ಭಯೋತ್ಪಾದಕರು ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಇಬ್ಬರು ಭಯೋತ್ಪಾದಕರನ್ನು ಪುಲ್ವಾಮಾದ ಐಜಾಜ್ ರಸೂಲ್ ನಜರ್ ಮತ್ತು ಶಾಹಿದ್ ಅಹ್ಮದ್ ಅಲಿಯಾಸ್ ಅಬು ಹಮ್ಜಾ ಎಂದು ಪೊಲೀಸರು ಗುರುತಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಪುಲ್ವಾಮಾದಲ್ಲಿ ಪಶ್ಚಿಮ ಬಂಗಾಳದ ಕಾರ್ಮಿಕನ ಮೇಲೆ ನಡೆದ ದಾಳಿಯಲ್ಲಿ ಇವರು ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಹೆಫ್ ಶಿರ್ಮಲ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬ ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.