ಬಿ.ಸಿ.ರೋಡು: ಪ್ರಧಾನಿ ಹುಟ್ಟುಹಬ್ಬ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ನೋಂದಣಿ
ಬಂಟ್ವಾಳ :ತಾಲ್ಲೂಕಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ಹುಟ್ಟುಹಬ್ಬ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ಶನಿವಾರ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾAಗ ದಾನ ನೋಂದಣಿ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಚಾಲನೆ ನೀಡಿದರು.
ದೇಶದ ಉಜ್ವಲ ಭವಿಷ್ಯ ನಿರ್ಮಾಣದ ಜೊತೆಗೆ ಜಗತ್ತಿನ ನಾಯಕರಾಗಿ ರೂಪುಗೊಂಡ ಪ್ರಧಾನಿ ನರೇಂದ್ರ ಮೋದಿ ಇವರ ೭೨ನೇ ಹುಟ್ಟು ಹಬ್ಬ ಆಚರಣೆ ಅರ್ತಪೂರ್ಣವಾಗಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.
ಇಲ್ಲಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ಹುಟ್ಟುಹಬ್ಬ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ಶನಿವಾರ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾAಗ ದಾನ ನೋಂದಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಪ್ರಭಾರಿ ಪುರುಷೋತ್ತಮ ಶೆಟ್ಟಿ ವಾಮದಪದವು ಇದ್ದರು. ಕೆಎಂಸಿ ಆಸ್ಪತ್ರೆ ಬ್ಲಡ್ ಬ್ಯಾಂಕಿನ ಡಾ.ಐಶ್ವರ್ಯ ತೇಜ, ವೆನ್ಲಾಕ್ ಆಸ್ಪತ್ರೆ ಟ್ರಾನ್ಸ್ ಪ್ಲಾಟ್ ಸಂಯೋಜಕಿ ಪದ್ಮಾ ವೇಣೂರು ಮಾಹಿತಿ ನೀಡಿದರು.
ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಶ್ವಥ್ ರಾವ್ ಬಾಳಿಕೆ ಸ್ವಾಗತಿಸಿ, ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ ವಂದಿಸಿದರು.