ಹ್ಯಾಂಡ್‌ಬಾಲ್ ಪಂದ್ಯಾಟ: ಎಸ್.ವಿ.ಎಸ್ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ
ಬಂಟ್ವಾಳ: ಮಂಗಳೂರು ವಿಕ್ಟೋರಿಯ ಆಂಗ್ಲ ಮಾಧ್ಯಮ ಶಾಲೆ ಲೇಡಿಹಿಲ್ ಎಂಬಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಎಸ್.ವಿ.ಎಸ್ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ, ಬಂಟ್ವಾಳದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ೮ನೇ ತರಗತಿ ವಿದ್ಯಾರ್ಥಿಗಳಾಧ ನಿವೇದ್ ಆರ್ ಸಾಲಿಯಾನ್, ಸಾನ್ವಿ ಎಸ್. ಎ., ಮತ್ತು ಕನ್ನಿಕ ಇವರು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಉಪಾಧ್ಯಕ್ಷೆ ವತ್ಸಲಾ ಕಾಮತ್, ಕರ‍್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ, ಅನಿರುದ್ಧ ಕಾಮತ್, ಎಸ್.ವಿ.ಎಸ್ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರಸಿಬ್ಬಂದಿ ಅಭಿನಂದಿಸಿದ್ದಾರೆ.