ಕುಕ್ಕುಜೆ:ಪದೋನ್ನತಿ ಹೊಂದಿದ ಶಿಕ್ಷಕಿ ಶ್ರೀಮತಿ ಜಯಶ್ರೀಯವರಿಗೆ ಬೀಳ್ಕೊಡುಗೆ ಸಮಾರಂಭ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆಯಲ್ಲಿ 11 ವರ್ಷ ಸೇವೆ ಸಲ್ಲಿಸಿ ಕುಂದಾಪುರ ತಾಲೂಕಿನ ಬೆಳ್ವೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿಪದೋನ್ನತಿ ಹೊಂದಿದ ಶ್ರೀಮತಿ ಜಯಶ್ರೀ ಯವರಿಗೆ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಅಧ್ಯಾಪಕ ವೃಂದ ಹಾಗೂ ಪಂಚಮಿ ಚಾರಿಟೇಬಲ್ ಟ್ರಸ್ಟ್ (ರಿ.)ದೊಂಡೇರಂಗಡಿಯ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಯಶಸ್ವಿ ಗೆಳೆಯರ ಬಳಗ,ದೊಂಡೇರಂಗಡಿಯ ಸದಸ್ಯರು ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ರವೀಂದ್ರ ನಾಯ್ಕ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಿ ,ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಸಂಘ (ರಿ.)ದೊಂಡೇರಂಗಡಿಯ ಅಧ್ಯಕ್ಷರಾದ ಹರೀಶ್ ದುಗ್ಗನ್ ಬೆಟ್ಟು, ಎಸ್ ಡಿ ಎಂ ಸಿ ಸದಸ್ಯರಾದ ಪ್ರಸಾದ್ ಆಚಾರ್ಯ, ಚೇತನ್ ಭಂಡಾರಿ ಪ್ರಭಾಕರ್ ಸೇರಿಗಾರ ಸತ್ಯೇಂದ್ರ ವಿಶ್ವನಾಥ್ ಹೆಗಡೆ, ಕೃಷ್ಣ, ವನಿತಾ,ಶಾಲಿನಿ ಶೆಟ್ಟಿ, ಶೋಭಾ ಶೆಟ್ಟಿ, ಭಾರತಿ ನಾಯ್ಕ, ಸುಜಯ ಕುಲಾಲ್, ಪ್ರಮೀಳಾ ಪೂಜಾರಿ, ಆಶಾ ನಾಯ್ಕ, ಲ. ಅಶೋಕ್ ಕುಮಾರ್, ಪ್ರಸನ್ನ ದೇವಾಡಿಗ, ಪ್ರದೀಪ್ ಶೆಟ್ಟಿ, ಭಾಸ್ಕರ್ ಸುವರ್ಣ ಪೋಷಕರು, ಹಳೆವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ದಯಾನಂದ ನಾಯಕ್ ಸ್ವಾಗತಿಸಿ, ಶಿಕ್ಷಕಿ ಯಶೋದಾ ಹೆಗ್ಡೆ ಧನ್ಯವಾದವಿತ್ತರು.
*ದೈಹಿಕ ಶಿಕ್ಷಣ ಶಿಕ್ಷಕ ಶಂಕರ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕರಾದ ಸತೀಶ್, ಮೀರಾ, ಸ್ವರ್ಣ, ದೀಕ್ಷಾ, ಕೀರ್ತಿ ಸಹಕರಿಸಿದರು.