ಫರಂಗಿಪೇಟೆ: ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ
ಬಂಟ್ವಾಳ: ಇಲ್ಲಿನ ಪುದು ಗ್ರಾಮದ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಮತ್ತು ಕುಂಜತ್ಕಲ ಪರಿಸರದಲ್ಲಿ ಚಿರತೆ ಓಡಾಟ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ನಿವಾಸಿ ರಫೀಕ್ ಎಂಬವರು ಶನಿವಾರ ತಡರಾತ್ರಿ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿ ಚಿರತೆ ಹಾದು ಹೋಗಿದೆ. ಈ ಸುದ್ದು ತಿಳಿದು ಸ್ಥಳೀಯರು ರಾತ್ರಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.
ಸೆ.25ರಂದುಭಾನುವಾರ ಬೆಳಿಗ್ಗೆ ಮತ್ತೆ ಇಲ್ಲಿನ ಕುಂಜತ್ಕಲ ಅಂಗನವಾಡಿ ಕೇಂದ್ರ ಬಳಿ ಚಿರತೆ ಕಾಣಿಸಿಕೊಂಡಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಸಹಿತ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.