ಕೈಕಂಬ: ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಸದಸ್ಯೆಯರಿಗೆ ಗ್ರಹ ಬಳಕೆಯ ಉತ್ಪನ್ನಗಳ ತಯಾರಿಗಾಗಿ ಅಂದಾಜು 17ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಸಜ್ಜಿತ ಕಟ್ಟಡಕ್ಕೆ ಶಾಸಕ ಭರತ್ ಶೆಟ್ಟಿ ಅವರು ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.

ಎಡಪದವು ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ, ಉಪಾಧ್ಯಕ್ಷೆ ಪ್ರೇಮಾ, ಪಿಡಿಓ ರಾಜೀವಿ.ಡಿ.ನಾಯ್ಕ್, ಕಾರ್ಯದರ್ಶಿ ಇಸ್ಮಾಯಿಲ್, ಪಂಚಾಯತ್ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ಶ್ರೀಮತಿ ಕಲ್ಯಾಣಿ, ಪದಾಧಿಕಾರಿಗಳು, ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿವರ್ಗ, ಸ್ಥಳೀಯ ಗಣ್ಯರು, ಗ್ರಾಮಸ್ಥರು ಹಾಜರಿದ್ದರು. 

By suddi9

Leave a Reply

Your email address will not be published. Required fields are marked *