ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಸೆ.30ರಂದು ಶುಕ್ರವಾರ ಲಲಿತಾಪಂಚಮಿಯಂದು ಅಮ್ಮನವರಿಗೆ ಹರಕೆಯ ರೂಪದಲ್ಲಿ ಬಂದ ಸೀರೆಗಳನ್ನು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ ತಂತ್ರಿ ಪೊಳಲಿ, ಕ್ಷೇತ್ರದ ಪ್ರಧಾನ ಅರ್ಚಕರಾದ ಮಾಧವ ಭಟ್, ಕೆ.ರಾಮ್ ಭಟ್, ನಾರಾಯಣ ಭಟ್, ಪರಮೇಶ್ವರಭಟ್, ಮಾಧವ ಮಯ್ಯ, ದೇವಳದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಅನುವಂಶಿಕ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ ಹಾಗೂ ಸಾವಿರ ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು 30ಸಾವಿರ ಸೀರೆಗಳನ್ನು ಭಕ್ತಾದಿಗಳಿಗೆ ನೀಡಲಾಯಿತು ಎಂದು ದೇವಳದ ಆಡಳಿತ ಮೊಕ್ತೇಸರ ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *