ಪುತ್ತೂರು ; ಪತ್ರಕರ್ತ, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ರವರ ಚೊಚ್ಚಲ ಕೃತಿ ಮಕ್ಕಳ ಮಾತು ಅನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಉಮಾಶ್ರೀ ನ.14 ರಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಯುವಬರಹಗಾರರ ಚೊಚ್ಚಲ ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಕೃತಿ ಬಿಡುಗಡೆಗೊಂಡಿದ್ದು, ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಬಂಜಗೆರೆ ಜಯಪ್ರಕಾಶ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿರಜನೀಶ್, ನಿರ್ದೇಶಕ ಕೆ.ಎ.ದಯಾನಂದ , ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಇದೇ ಸಮಾರಂಭದಲ್ಲಿ 2011-12 ಹಾಗೂ 2012-2013ನೇ ಸಾಲಿನ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ಯುವ ಬರಹಗಾರರ ಚೊಚ್ಚಲ ಕೃತಿಯ ಪ್ರೋತ್ಸಾಹಧನಕ್ಕೆ ಆಯ್ಕೆಯಾದ ವಿವಿಧ ಬರಹಗಾರರ ಕೃತಿಗಳು ಲೋಕಾರ್ಪಣೆಗೊಂಡವು.

