ಬಿ.ಜೆ.ಪಿ ಮಹಿಳಾ ಮೋರ್ಚಾದ ವತಿಯಿಂದ ಅಂಗನವಾಡಿ ಸೇವಾ ದಿವಾಸ್ ಕಾರ್ಯಕ್ರಮ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಹಿಳಾ ಮೋರ್ಚಾದ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸೇವಾ ದಿವಾಸ್ ಕಾರ್ಯಕ್ರಮವು ಅರಳ ಗ್ರಾಮದ ನವಶಕ್ತಿನಗರದಲ್ಲಿ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ಜರಗಿತು.
ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಭಿನಂದಿಸಿ ತಾವೆ ಆಡುಗೆ ತಯಾರಿಸಿ ಅವರೊಟ್ಟಿಗೆ ಸಹ ಬೋಜನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಭಾರತಿ ಚೌಟ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ರವೀಶ್ ಶೆಟ್ಟಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗಳಾದ ಸೀಮಾ ಮಾಧವ ಲಕೀತ ಶೆಟ್ಟಿ ಅರಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷೀಧರ ಶೆಟ್ಟಿ ಮಹಿಳಾ ಮೋರ್ಚಾದ ಪ್ರಭಾರಿ ಚಂದ್ರವತಿ ಪೊಳಲಿ ಪ್ರಮುಖರಾದ ನಳಿನಿ ಶೆಟ್ಟಿ ರೂಪ ಶೆಟ್ಟಿ ಕಮಲಾಕ್ಷಿ ಪೂಜಾರ್ತಿ ರಂಜನ್ ಕುಮಾರ್ ಶೆಟ್ಟಿ ಹಾಗೂ ಮಹಿಳಾ ಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು .