ಬಂಟ್ವಾಳ 39 ಗ್ರಾ.ಪಂ.ಗಳ ಪೈಕಿ ಐದು ಗ್ರಾಮ ಪಂಚಾಯತ್ ಗಳಿಗೆ 26.58 ಕೋಟಿ ರೂಗಳಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನ
ಬಂಟ್ವಾಳ: ಬಂಟ್ವಾಳ ಕ್ಷೇತ್ರದ 39 ಗ್ರಾ.ಪಂ.ಗಳ ಪೈಕಿ ಐದು ಗ್ರಾಮ ಪಂಚಾಯತ್ ಗಳಿಗೆ ಪ್ರಸ್ತುತ 26.58 ಕೋಟಿ ರೂ.ಗಳಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಕೊನೆಯದಾಗಿ ಉಳಿದ ಇನ್ನು ಐದು ಗ್ರಾಮಗಳಿಗೆ ಕೆ.ಯು.ಡಬ್ಲ್ಯೂ ಎಸ್.ಯೋಜನೆ ಮೂಲಕ 300 ಕೋಟಿ ರೂಗಳ ಯೋಜನೆ ಶೀಘ್ರವಾಗಿ ಅನುಷ್ಠಾನಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಜಲಜೀವನ್ ಮಿಷನ್ ಯೋಜನೆಯಡಿ 26.58 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಂಟ್ವಾಳ ತಾಲೂಕಿನ ವ್ಯಾಪ್ತಿಯ ಪಂಚಾಯತಗಳಾದ
ಕಳ್ಳಿಗೆ, ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಮತ್ತು ತೆಂಕಬೆಳ್ಳೂರು ಗ್ರಾಮಗಳಿಗೆ ಶುಧ್ದ ಕುಡಿಯುವ ನೀರಿನ ಯೋಜನೆಗಳಿಗೆ ಬೆಂಜನಪದವು ಮೇಲಿನ ಸೈಟ್ ಎಂಬಲ್ಲಿ ಗುರುವಾರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
2024 ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬರಿಗೂ ಸೂರು, ಪ್ರತಿ ಮನೆಗೂ ನಳ್ಳಿ ನೀರು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಜೀಪ ಒಟ್ಟು ಐದು ಪಂಚಾಯತ್ ಗಳಾದ ಸಜೀಪ ಮುನ್ನೂರು, ಸಜೀಪ ಮೂಡ, ವೀರಕಂಭ,ಮಂಚಿ, ಬೋಳಂತರು ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆ ಬಾಕಿ ಉಳಿದಿದ್ದು, ಮುಂದಿನ ಹಂತದಲ್ಲಿ ಈ ಭಾಗದಲ್ಲಿ ಯೂ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತದೆ. ಎಂದು ಹೇಳಿದ ಅವರು, ಗ್ರಾಮದಲ್ಲಿ ಜನಜೀವನ್ ಮಿಷನ್ ಯೋಜನೆಯಡಿಯಲ್ಲಿ ನೀರು ನೀಡುವಂತಾದರೆ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಕ್ಕು ನೀರು ಸರಬರಾಜು ಮಾಡಿದಂತಾಗುತ್ತದೆ, ಇದು ನನ್ನ ಅತ್ಯಂತ ಖುಷಿಯ ವಿಚಾರ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು.
ವೇದಿಕೆಯಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,
ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷೆ ಯಶೋಧ ದಯಾನಂದ , ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಪ್ರಕಾಶ್ ಆಳ್ವ, ಮೇರೆಮಜಲು ಗ್ರಾ.ಪಂ.ಅಧ್ಯಕ್ಷೆ ಜಯಶ್ರೀ ಕರ್ಕೇರ, ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ನರೇಂದ್ರಬಾಬು .ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿಕೆ ನಾಯಕ್ , ಗುತ್ತಿಗೆದಾರ ಸುಧಾಕರ ಶೆಟ್ಟಿ , ಗಿರಿಪ್ರಕಾಶ್ ತಂತ್ರಿ ಹಾಗೂ ಗ್ರಾ.ಪಂ.ಸದಸ್ಯರುಗಳು, ಪಿಡಿಒ ಗಳು ಮತ್ತಿತರರು ಉಪಸ್ಥಿತರಿದ್ದರು.
ಕಳ್ಳಿಗೆ ಗ್ರಾ.ಪಂ.ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ಸ್ವಾಗತಿಸಿ, ವಂದಿಸಿದರು.