ಬೆಂಜನಪದವು: ರೂ ೨೬.೫೮ ಕೋಟಿ ವೆಚ್ಚದ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ, ಪ್ರತೀ ಮನೆಗೆ ನಳ್ಳಿ ನೀರು ಪೂರೈಕೆ: ಶಾಸಕ ರಾಜೇಶ ನಾಯ್ಕ್
ಬಂಟ್ವಾಳ: ತಾಲ್ಲೂಕಿನ ಬೆಂಜನಪದವಿನಲ್ಲಿ ರೂ ೨೬.೫೮ ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶನಿವಾರ ಶಿಲಾನ್ಯಾಸ ನೆರವೇರಿಸಿದರು.
ಬಂಟ್ವಾಳ ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೆ ನಳ್ಳಿ ಮೂಲಕ ಕುಡಿಯುವ ನೀರು ಪೂರೈಸಲು ರೂ ೨೬.೫೮ ಕೋಟಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.
ಇಲ್ಲಿನ ಬೆಂಜನಪದವು ಎಂಬಲ್ಲಿ ಕಳ್ಳಿಗೆ, ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು, ತೆಂಕ ಬೆಳ್ಳೂರು ಗ್ರಾಮಗಳಿಗೆ ಅನುಕೂಲವಾಗುವಂತೆ ರೂ ೨೬.೫೮ ಕೋಟಿ ವೆಚ್ಚದಲ್ಲಿ ೫.೫ ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣಕ್ಕೆ ಶನಿವಾರ ಸಂಜೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಇದೇ ವೇಳೆ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು. ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಮಾತನಾಡಿದರು. ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷೆ ಯಶೋಧ ದಯಾನಂದ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಪ್ರಕಾಶ್ ಆಳ್ವ, ಮೇರಮಜಲು ಗ್ರಾ.ಪಂ.ಅಧ್ಯಕ್ಷೆ ಜಯಶ್ರೀ ಕರ್ಕೇರ, ಮುಖ್ಯಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರಬಾಬು, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಕೆ. ನಾಯ್ಕ್ , ಗುತ್ತಿಗೆದಾರ ಸುಧಾಕರ ಶೆಟ್ಟಿ ಮೊಗರೋಡಿ, ಪ್ರಮುಖರಾದ ಗಿರಿಪ್ರಕಾಶ್ ತಂತ್ರಿ , ಸುದರ್ಶನ್ ಬಜ, ವಿಕಾಸ್ ಪುತ್ತೂರು, ಕಾರ್ತಿಕ್ ಬಲ್ಲಾಳ್ ಮತ್ತಿತರರು ಇದ್ದರು. ಕಳ್ಳಿಗೆ ಗ್ರಾ.ಪಂ.ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ಸ್ವಾಗತಿಸಿ, ವಂದಿಸಿದರು.