ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಘೋಷಣೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ.

ಇಂದು ನಗರದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ. ನಾಳೆಯೇ ಸಂಪುಟ ಸಭೆ ಕರೆಯಲಾಗುವುದು. ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ನಾಳೆ ಅಧಿಕೃತ ಆದೇಶದ ಮುದ್ರೆ ಹಾಕಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಈಗ ಇರುವ ಯಾವುದೇ ಮೀಸಲಾತಿ ಕಡಿಮೆ ಮಾಡಲ್ಲ. ಶೇ.50ಕ್ಕೂ ಮೇಲೆ ಮೀಸಲಾತಿ ಕೊಡುತ್ತೇವೆ. EWS ಕೋಟಾ ಈಗಾಗಲೇ ಇದೆ. ಅದು ಸುಪ್ರೀಂಕೋರ್ಟ್ (Supreme Court) ನಲ್ಲಿ ಇದೆ. ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಜಾತಿಗೂ ಸಮಸ್ಯೆ ಆಗದಂತೆ, ಅನ್ಯಾಯ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಎಂದು ಭರವಸೆ ನೀಡಿದ್ದಾರೆ.