ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ
ಬೆಳ್ಳಾರೆ : ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು. ಅದರಂತೆ ಬೆಳ್ಳಾರೆ ಠಾಣೆ ಯಲ್ಲಿ ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಅಟ್ರಾಸಿಟಿ ಕೇಸು ನೀಡಿದ್ದು ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ