ಕರ್ತವ್ಯನಿರತ ಮಹಿಳಾ ಪಿಎಸ್‌ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ
ಮಂಗಳೂರು: ಎನ್‌ಎಂಪಿಟಿಯಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನವಮಂಗಳೂರು ಬಂದರು ಪ್ರಾಧಿಕಾರದ ಮುಖ್ಯ ಗೇಟ್ ಬಳಿ ಅ.12ರಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಭದ್ರತಾ ಸಿಬ್ಬಂದಿಯನ್ನು ಎಂಆರ್ ಪಿಎಲ್ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಓಂಬೀರ್ ಸಿಂಗ್ ಪರ್ಮಾರ್ ಪತ್ನಿ ಜ್ಯೋತಿ ಬಾಯಿ ಸಿಂಗ್ ಎಂದು ಗುರುತಿಸಲಾಗಿದೆ.
ಜ್ಯೋತಿ ಭಾಯಿ ಅವರು ಪರ್ಮರ್ ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ.
ಗಂಡ ಓಂಬೀರ್ ಸಿಂಗ್ ಎಂ ಆರ್ ಪಿಎಲ್ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿದ್ದಾರೆ. ದಂಪತಿಗಳು ಇಬ್ಬರೂ ಭರತ್‌ಪುರ ಜಿಲ್ಲೆ ರಾಜಸ್ಥಾನಕ್ಕೆ ಸೇರಿದವರಾಗಿದ್ದಾರೆ. ಘಟನೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ.