ಬಂಟ್ವಾಳ: ಸಮಾನ ಮನಸ್ಕ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ
ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನೂತನ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಪಂಜಿಕಲ್ಲು ಇವರು ಆಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನಲ್ಲಿ ಸಮಿತಿ ಅಧ್ಯಕ್ಷ ಪ್ರಕಾಶ್ ಬಿ.ಶೆಟ್ಟಿ ಅಧ್ಯಕ್ಷತೆಯಲ್ಲಿ ಅ.11ರಂದು ಮಂಗಳವಾರ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಶೇಖರ್ ಲೆಕ್ಕಪತ್ರ ಮಂಡಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಸತೀಶ್ ಕುಮಾರ್ ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ ಮಾತನಾಡಿ, ಬ್ರಹ್ಮರಕೂಟ್ಲು ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ನಡೆಸಲು ಸನ್ನದ್ಧರಾಗಬೇಕು ಎಂದರು.
ನೂತನ ಪದಾಧಿಕಾರಿಗಳ ಆಯ್ಕೆ:
ಇದೇ ವೇಳೆ ನೂತನ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಪಂಜಿಕಲ್ಲು, ಉಪಾಧ್ಯಕ್ಷರಾಗಿ ಜಗನ್ನಾಥ್ ಬಂಟ್ವಾಳ, ಇಸ್ಮಾಯಿಲ್ ಅರಬಿ ಕೆಳಗಿನ ಪೇಟೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಬಂಟ್ವಾಳ್, ಸಹ ಕಾರ್ಯದರ್ಶಿಯಾಗಿ ಪ್ರೇಮನಾಥ ಕೆ., ಸೀತಾರಾಮ ಶೆಟ್ಟಿ, ಕೋಶಾಧಿಕಾರಿಯಾಗಿ ಸುರೇಂದ್ರ ಬಂಟ್ವಾಳ್, ಕಾನೂನು ಸಲಹೆಗಾರರಾಗಿ ವಕೀಲ ಚಂದ್ರಶೇಖರ ಪೂಜಾರಿ ಆಯ್ಕೆಗೊಂಡರು.