ಶ್ರೀರಾಮ ಪ್ರೌಢಶಾಲೆಯಲ್ಲಿ ಬಾಲಿಕಾ ಶಿಬಿರ
ಕಲ್ಲಡ್ಕ: ಶ್ರೀ ರಾಮ ಪ್ರೌಢಶಾಲೆಯಲ್ಲಿ ಅ.13ರಿಂದ ಅ.15ವರೆಗೆ ನಡೆಯುವ ಬಾಲಿಕಾ ಶಿಬಿರವನ್ನು ಮಂಗಳೂರಿನ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಆಗಿರುವ ಗೀತಾ ಕುಲಕರ್ಣಿ ದೀಪ ಪ್ರಜ್ವಲನ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದಡಾ. ಪ್ರಭಾಕರ ಭಟ್ ಕಲ್ಲಡ್ಕಇವರು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ವೇದಿಕೆಯಲ್ಲಿ ರಾಷ್ಟ್ರ ಸೇವಿಕಾ ಸಮಿತಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಕಮಲಾ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹ ಸಂಚಾಲಕರಾದ ಶ್ರೀ ರಮೇಶ್‌ಎನ್, ಪ್ರೌಢಶಾಲೆಯ ಆಡಳಿತಾಧಿಕಾರಿ ಶಾಂಭವಿ, ಮುಖ್ಯೋಪಾಧ್ಯಾಯ ಗೋಪಾಲ ಎಂ ಹಾಗೂ ಸೆಕೆಂಡರಿ ಸ್ಕೂಲ್‌ನ ಉಪಪ್ರಾಂಶುಪಾಲ ತಿರುಮಲೇಶ್ವರ ಪ್ರಶಾಂತ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಕ್ಷಾ ಮಾತಾಜಿ ನಿರೂಪಿಸಿ,ಗಾಯತ್ರಿ ಮಾತಾಜಿ ಸ್ವಾಗತಿಸಿ, ಸುಮಿತ್ರಾ ಮಾತಾಜಿ ವಂದಿಸಿದರು.