ಬೆಂಗಳೂರು: ಮುರುಘಾ ಮಠ (Murugha Shree) ಕ್ಕೆ ಹೊಸ ಶ್ರೀಗಳ ನೇಮಕ ವಿಚಾರ ಕಾನೂನು ರೀತಿಯೇ ತೀರ್ಮಾನ ಆಗಲಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಆಡಳಿತ ವಿಚಾರದಲ್ಲಿ ಆಗ್ತಿರೋ ಸಮಸ್ಯೆಗಳನ್ನ ಪ್ರಸ್ತಾಪ ಮಾಡಿದ್ದಾರೆ. ಮಠದ ಸಂಪೂರ್ಣ ವಿಚಾರಗಳ ಬಗ್ಗೆ ನನಗೆ ಹೇಳಿದ್ದಾರೆ ಅಂತ ತಿಳಿಸಿದರು.

ಮಠದಲ್ಲಿ ಕಾನೂನು ಪ್ರಕಾರ ಒಂದು ಟ್ರಸ್ಟ್ ಇದೆ. ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡುತ್ತೇವೆ. ಏನೇ ಕ್ರಮ ತೆಗೆದುಕೊಂಡರೂ ಕಾನೂನು ಪ್ರಕಾರವೇ ಮುಂದಿನ ಕ್ರಮ ತಗೋತೀವಿ ಅಂತ ತಿಳಿಸಿದರು.

By suddi9

Leave a Reply

Your email address will not be published. Required fields are marked *