ಬಿಜೆಪಿ ಬಂಟ್ವಾಳ ಮಂಡಲಕ್ಕೆ ಅತ್ಯುತ್ತಮ ಪ್ರಶಸ್ತಿ
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೇವಾ ಪ್ರಾಕ್ಷಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ ಬಿಜೆಪಿ ಬಂಟ್ವಾಳ ಮಂಡಲ ಅತ್ಯುತ್ತಮ ಮಂಡಲ ಪ್ರಶಸ್ತಿ ಪಡೆದುಕೊಂಡಿದೆ.

ಶನಿವಾರ ಆಡ್ಯಾರು ಗಾರ್ಡನ್ ಸಭಾಂಗಣದಲ್ಲಿ ನಡೆದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರಿ ಅವರಿಂದ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ಜಿಲ್ಲಾ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಸೇವಾ ಪ್ರಾಕ್ಷಿಕ ಕಾರ್ಯಕ್ರಮದಲ್ಲಿ ಬಂಟ್ವಾಳ ಮಂಡಲದ ವತಿಯಿಂದ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಸ್ವಚ್ಛತೆ, ಗಿಡ ನೆಟ್ಟು ಕೆರೆಗಳ ಅಭಿವೃದ್ಧಿ, ಆದರ್ಶ ಅಂಗನವಾಡಿ ಕೇಂದ್ರದ ದತ್ತು ಸ್ವೀಕಾರ, ಮೊದಲಾದ ಕಾರ್ಯಕ್ರಮವನ್ನು ಬಂಟ್ವಾಳ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.
