ಸಂಸದರಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ಮಂಗಳೂರು: ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಮಾರ್ಟ್ ಸಿಟಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.