ಬಂಟ್ವಾಳ: ಕೊಲೆಯತ್ನ ಪ್ರಕರಣ, ತಲೆಮರೆಸಿಕೊಂಡ ಆರೋಪಿ ಪತ್ತೆ
ಬಂಟ್ವಾಳ: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘ ಸಮಯ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾಸರಗೋಡು ಜಿಲ್ಲೆ ಕುಂಜತ್ತೂರು ಗ್ರಾಮದ ತೂಮಿನಾಡು ನಿವಾಸಿ ಯಾಕೂಬ್ ಎಂಬವರ ಪುತ್ರ ಮಹಮ್ಮದ್ ಫಾರೂಕ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಕಳೆದ ೨೦೦೭ರಲ್ಲಿ ನಡೆದ ಕೋಮುಗಲಭೆ ವೇಳೆ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಕಳೆದ ೧೫ ವರ್ಷಗಳಿಮದ ತಲೆಮರೆಸಿಕೊಂಡಿದ್ದ ಈತನನ್ನು ಡಿವೈಎಸ್ಪಿ ಪ್ರತಾಪ್ ಸಿಂಗ್ ಥೊರಾಟ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸೈ ಅವಿನಾಶ್ ಗೌಡ ನೇತೃತ್ವದ ಪೊಲೀಸರು ಕೇರಳದ ಬಂದ್ಯೋಡು ಎಂಬಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.