ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟ ಮಳಿಗೆಗಳಿಗೆ ಅವಕಾಶ
ಬಂಟ್ವಾಳ: ನವಂಬರ್ 12 ಮತ್ತು 13 ರಂದು ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಲಿರುವ 22ನೆಯ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಾರಾಟ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು.
ಇಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ ಇಡಲು ಆಸಕ್ತಿ ಇರುವ ಪ್ರಕಾಶಕರು,ಅಥವಾ ಪುಸ್ತಕ ಮಾರಾಟಗಾರರು ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ (ಮೊ.ಸಂಖ್ಯೆ- 9731437602) ಅಥವಾ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ಅಬೂಬಕರ್ ಅಮ್ಮಂಜೆ (ಮೊ.ಸಂಖ್ಯೆ-9449386376)ಇವರನ್ನು ಸಂಪರ್ಕಿಸ ಬಹುದೆಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.