ರಾಯಿ: ಮುಚ್ಚಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಸಿದ್ಧತೆ
ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾಲೋಚನಾ ಸಭೆಯಲ್ಲಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಸ್ಥಾಪಕಾಧ್ಯಕ್ಷ ಹರೀಶ ಆಚಾರ್ಯ ಮಾತನಾಡಿದರು.
ಸುಮಾರು 60 ವರ್ಷಗಳ ಹಿನ್ನೆಲೆ ಹೊಂದಿರುವ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತದಲ್ಲಿದ್ದು, ಈ ಸರ್ಕಾರಿ ಶಾಲೆ ಉಳಿಸಿ ಬೆಳೆಸಲು ಇಲ್ಲಿನ ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಸಿದ್ಧತೆ ನಡೆಸಿದೆ ಎಂದು ಸಂಘದ ಸ್ಥಾಪಕಾಧ್ಯಕ್ಷ, ಮಾಜಿ ಗ್ರಾ.ಪಂ.ಅಧ್ಯಕ್ಷ ಹರೀಶ ಆಚಾರ್ಯ ಹೇಳಿದ್ದಾರೆ.
ಇಲ್ಲಿನ ರಾಯಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಎರಡನೇ ಹಂತದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಎಲ್ ಕೆ ಜಿ, ಯುಕೆಜಿ ಶಿಕ್ಷಣ ಆರಂಭಿಸಲು ಪ್ರತ್ಯೇಕ ಶಿಕ್ಷಕಿ ನೇಮಕಗೊಳಿಸಲಾಗಿದ್ದು, ಮಕ್ಕಳಿಗೆ ಪಠ್ಯದ ಜೊತೆಗೆ ಸಂಗೀತ, ಚಿತ್ರಕಲೆ, ಭರತನಾಟ್ಯ, ಯಕ್ಷಗಾನ ಮತ್ತಿತರ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಲು ವಿವಿಧ ಸಂಘ ಸಂಸ್ಥೆ ಮತ್ತು ದಾನಿಗಳ ನೆರವು ಪಡೆಯುವುದಾಗಿ ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ, ಗ್ರಾ.ಪಂ.ಸದಸ್ಯ ಸಂತೋಷ್ ಗೌಡ, ಉಷಾ ಸಂತೋಷ್ ಸಪಲ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ, ಉಪನ್ಯಾಸಕಿ ರೂಪಾ ಹರೀಶ ಆಚಾರ್ಯ, ಪ್ರಮುಖರಾದ ಮಧುಕರ ಬಂಗೇರ, ವಸಂತ ಗೌಡ ಮುದ್ದಾಜೆ, ವಿಶ್ವನಾಥ ಗೌಡ, ರಾಮಣ್ಣ ಗೌಡ ಮೀಯಾಲು, ಪುಷ್ಪಲತಾ ಎಸ್., ಹೇಮಾ ಎಚ್.ರಾವ್, ಸುಧೀಂದ್ರ ಭಂಡಾರಿ ಮತ್ತಿತರರು ಇದ್ದರು. ಮುಖ್ಯಶಿಕ್ಷಕ ಜಯರಾಮ ಪಡ್ರೆ ಸ್ವಾಗತಿಸಿ, ಶಿಕ್ಷಕ ಶ್ರೀಪತಿ ಭಟ್ ವಂದಿಸಿದರು.