ಬಂಟ್ವಾಳ ವಲಯ 8ರ ಸಮಾವೇಶದಲ್ಲಿ ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ
ಬಂಟ್ವಾಳ: ಜೈನ್ ಮಿಲನ್ ತಂಡಕ್ಕೆ ಮೂಡುಬಿದ್ರೆ ಎಕ್ಸಲೆಂಟ್ ಕಾಲೇಜಿನಲ್ಲಿ ಈಚೆಗೆ ನಡೆದ ವಲಯ 8ರ ಸಮಾವೇಶದಲ್ಲಿ ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು. ರಾಷ್ಟ್ರೀಯ ಕಾರ್ಯಾಧ್ಯಕ್ಷ ಸುರೇಂದ್ರ ಕುಮಾರ್, ಮಹಿಳಾ ಅಧ್ಯಕ್ಷೆ ಅನಿತಾ ಸುರೇಂದ್ರ ಕುಮಾರ್, ವಲಯಾಧ್ಯಕ್ಷ ಪುಷ್ಪರಾಜ್ ಜೈನ್, ಉಪಾಧ್ಯಕ್ಷ ಸುದರ್ಶನ್ ಜೈನ್, ಸುಭಾಶ್ಚಂದ್ರ ಜೈನ್, ಯುವರಾಜ ಜೈನ್ ಮತ್ತಿತರರು ಇದ್ದರು.