ಮಾರ್ನಬೈಲು: ಸಿಡಿಲು ಬಡಿದು ಮನೆಗೆ ಅಪಾರ ಹಾನಿ
ಬಂಟ್ವಾಳ: ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.
ಇಲ್ಲಿನ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಸ್ಥಳೀಯ ನಿವಾಸಿ ಯೋಗೀಶ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ರೂ ೫ಲಕ್ಷ ಮೊತ್ತದ ಹಾನಿ ಉಂಟಾಗಿದೆ. ಇವರ ಮನೆ ಪಕ್ಕದ ತೆಂಗಿನ ಮರಕ್ಕೆ ಶನಿವಾರ ಸಂಜೆ ಸಿಡಿಲು ಬಡಿದಿದ್ದು, ಇದೇ ವೇಳೆ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಮನೆಯಲ್ಲಿ ವಿದ್ಯುತ್ ಸಾಮಾಗ್ರಿ ಸುಟ್ಟು ಕರಕಲಾಗಿದೆ ಎಂದು ಅವರು ತಿಳಿಸಿದ್ದಾರೆ.