ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ
ಬಂಟ್ವಾಳ: ನಿರತ ಸಾಹಿತ್ಯ ಸಂಪದ, ಕಡೆಗೋಳಿ ಬಂಟ್ವಾಳ ಇದರ ಈ ಬಾರಿಯ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿನ ಇವರ ವಿಶೇಷ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ 6ರಂದು ಬಿಸಿರೋಡ್‌ನ ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ನಿರತದ 25ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ
1996ರಲ್ಲಿ ಸಮಾನ ಮನಸ್ಕ ಸಾಹಿತ್ಯಾಸಕ್ತರಿಂದ ಪ್ರಾರಂಭಗೊಂಡ ನಿರತ ಸಾಹಿತ್ಯ ಸಂಪದ ಹಲವು ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವು ದಿಗ್ಗಜರಿಗೆ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.